ವಿಜಯನಗರ :ಹೊಸಪೇಟೆ (ಜಾಗೃತಿ ಬೆಳಕು)
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ಜಿಲ್ಲಾ ಅಂಕಿತ ಅಧಿಕಾರಿಗಳು ಮಾರ್ಗದರ್ಶನದಲ್ಲಿ ಹೊಸಪೇಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ನಾಗರಾಜ್ ಕೆ, ಕಚೇರಿ ಸಹಾಯಕ ಕೆಂಚಪ್ಪ ಸೇರಿಕೊಂಡು ಹೋಟೆಲ್ ಗಳು, ಬೀದಿ ಬದಿ ವ್ಯಾಪಾರಿಗಳು ಮತ್ತು ರೆಸ್ಟೋರೆಂಟ್ಗಳಿಗೆ ಭೇಟಿ ನೀಡಿ ಆಹಾರ ಸುರಕ್ಷತೆ ಗುಣಮಟ್ಟ ಕಾಯ್ದೆ ಬಗ್ಗೆ, ವೈಯಕ್ತಿಕ ಸ್ವಚ್ಛತೆ, ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ, ಸ್ವಚ್ಛತೆ ಇಲ್ಲದಿರುವ ಹೋಟೆಲ್ ಗಳಿಗೆ ನೋಟಿಸ್ ನೀಡಿ ದಂಡ ವಿಧಿಸಲಾಯಿತು , ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ವರದಿ :-ಮೊಹಮ್ಮದ್ ಗೌಸ್