ಜಾಗೃತಿ ಬೆಳಕು,ಹೊಸಪೇಟೆ, ವಿಜಯನಗರ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಣ್ಣಕ್ಕಿ ಲಕ್ಷ್ಮಣ್ ರವರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಪತ್ರ ನೀಡಿದರು. ಮತ್ತು ಮಾನ್ಯ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆಂದು ತಿಳಿಸಿದರು.
“ಫೆಬ್ರವರಿ 8 ರಂದು ಸ್ವಾಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯರಿಂದ ಬೆಂಗಳೂರು ಚಲೋ”
ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಪ್ರಕರಣ 243ಜಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ಅಧಿನಿಯಮ 1993ರ ಪ್ರಕರಣ 58(4)ರ ಅನ್ವಯ ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿವೆ.
ಆದರೆ, ಮೇಲಿನ ಹಂತದ ಅಧಿಕಾರಿಗಳು ಹಾಗು ಜನಪ್ರತಿನಿಧಿಗಳು ನೇರವಾಗಿ ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ, ನಿರ್ಣಯಗಳಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಗ್ರಾಮ ಪಂಚಾಯಿತಿಗಳನ್ನು ತಮ್ಮ ಕೈ ಕೆಳಗೆ ಕಾರ್ಯನಿರ್ವಹಿಸುವ ಶಾಖಾ ಕಛೇರಿಗಳನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಂವಿಧಾನ ಬದ್ಧ ಸಂಸ್ಥೆಗಳಾದ ಗ್ರಾಮ ಪಂಚಾಯಿತಿಗಳಿಗೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೇವಲ ಮೂಕ ಪ್ರೇಕ್ಷಕರಾಗಿದ್ದಾರೆ. “ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಭಾರತದ ಕಟ್ಟಕಡೆಯ ವ್ಯಕಿಯನ್ನು ಪ್ರಭುವನ್ನಾಗಿಸಬೇಕೆಂಬ” ಗಾಂಧೀಜಿಯವರ ಆಶಯ ಮಣ್ಣು ಪಾಲಾಗಿದೆ.
ಪಂಚಾಯತ್ ರಾಜ್ ವ್ಯವಸ್ಥೆಯ ಕಾರಣದಿಂದಾಗಿ ಎಲ್ಲ ವರ್ಗದ ಜನರಿಗೆ ಹಾಗೂ ಮಹಿಳೆಯರಿಗೆ ರಾಜಕೀಯ ಅಧಿಕಾರ ದೊರಕಿದೆ. ದೇಶದ ಅಭಿವೃದ್ಧಿಯಲ್ಲಿ ಎಲ್ಲರೂ ಭಾಗೀದಾರರಾಗಬೇಕೆನ್ನುವ ಬಾಬಾ ಸಾಹೇಬ್ ಅಂಬೇಡ್ಕರರ ಕನಸು ನನಸಾಗಿದೆ. ಆದರೆ, ಮೇಲಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನೇರವಾಗಿ ಪಂಚಾಯಿತಿಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದರಿಂದ ಮೀಸಲಾತಿಯ ಉದ್ದೇಶ ಸಂಪೂರ್ಣ ವಿಫಲವಾಗಿದೆ. ಅಧಿಕಾರ ಇದ್ದರೂ ಚಲಾಯಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ವತಂತ್ರ‍್ಯ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕಿದ್ದ ಗ್ರಾಮ ಪಂಚಾಯಿತಿಗಳು ತಮ್ಮ ಸ್ವತಂತ್ರ‍್ಯವನ್ನು ಕಳೆದುಕೊಂಡಿವೆ. ಸಂವಿಧಾನದ ಮತ್ತು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ ಆಶಯದಂತೆ ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುವಂತಾಗಲು, ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸ್ವಾಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯರು “ಮಹಾತ್ಮಾ ಗಾಂಧಿಜಿ ರವರ ಕನಸು ಗ್ರಾಮಸ್ವರಾಜ್ಯ ಮತ್ತು ಬಾಬಾಸಾಹೇಬ್ ಅಂಬೇಡ್ಕರ ಸಾಮಾಜಿಕ ನ್ಯಾಯದ ಉಳಿವಿಗೆ ಆಗ್ರಹಿಸಿ ಬೆಂಗಳೂರು ಚಲೋ” ಕಾರ್ಯಕ್ರಮವನ್ನು ಫೆಬ್ರವರಿ 8. ಗುರುವಾರ ಬೆಳಿಗ್ಗೆ 10.30 ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್‌ರವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದಾರೆ.ಯಂದು ವಿಜಯನಗರ ಜಿಲ್ಲಾಧ್ಯಕ್ಷರಾದ ಸಣ್ಣಕ್ಕಿ ಲಕ್ಷ್ಮಣ್ ಮಾಧ್ಯಮದ ಜೊತೆಗೆ ಮಾತನಾಡಿದರು
ಬೇಡಿಕೆಗಳು :-
ಗ್ರಾಮ ಪಂಚಾಯಿತಿಗಳಿಗೆ ತಮ್ಮ ಜವಾಬ್ದಾರಿಗಳು ಸಮರ್ಥವಾಗಿ ನಿರ್ವಹಿಸಲು ಬೇಕಾಗುವ ಜವಾಬ್ದಾರಿ ನಕ್ಷೆ ರಚನೆ.
ಪ್ರಜಾಪ್ರಭುತ್ವದ ಮೂಲಘಟಕಗಳಾದ ಪ್ರಜೆಗಳಿಗೆ ಅಧಿಕಾರ ನೀಡಲು ಗ್ರಾಮಸಭಾಗಳಿಗೆ ನಿಯಮಗಳ ರಚನೆ.
ಸರ್ಕಾರದ ವಿವಿಧ ಯೋಜನೆಗಳ ಸೇವೆಯನ್ನು ಜನರ ಬಳಿಗೆ ಕೊಂಡೊಯ್ಯುವ ದೃಷ್ಟಿಯಿಂದ ಬಾಪುಜಿ ಸೇವಾ ಕೇಂದ್ರಗಳ ಬಲವರ್ಧನೆ, ಮುಂಚೂಣ ಕಾರ್ಯಾಲಯಗಳ ಸ್ಥಾಪನೆ.
೨೯ವಿಷಯಗಳಿಗೆ ಸಂಬAಧಿಸಿದ ಎಲ್ಲಾ ಇಲಾಖೆಗಳು ಪಂಚಾಯತ್ ರಾಜ್ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಸುವಂತಾಗಲು ಅಧಿಕಾರ ವಿಕೇಂದ್ರೀಕರಣ ಕಾಯ್ದೆ ರಚನೆ.
ಗ್ರಾಮ ಪಂಚಾಯಿತಿಯ ಆಡಳಿತ ವ್ಯವಸ್ಥಿತವಾಗಿ ನಡೆಯಲು ಕಛೇರಿ ನಿರ್ವಹಣ ಕೈಪಿಡಿ ರಚನೆ.
ಇ-ಸ್ವತ್ತು ಅಂದೋಲನದ ಮೂಲಕ ಗ್ರಾಮ ಪಂಚಾಯಿತಿಯ ತೆರಿಗೆಗೆ ಒಳಪಟ್ಟಿರುವ ಎಲ್ಲಾ ಆಸ್ತಿಗಳಿಗೆ ಈ ಸ್ವತ್ತು ದಾಖಲೆ ಸೃಜನೆ ಮಾಡಿ ಹಂಚುವುದು.
ಪಂಚಾಯತಿ ಸದಸ್ಯರನ್ನು ರಾಜ್ಯ ಶಿಷ್ಟಾಚಾರಕ್ಕೆ ಒಳಪಡಿಸುವುದು.
ಕೇರಳ ಮಾದರಿಯ ಗೌರವಧನ ಹೆಚ್ಚಳ.
ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನದಲ್ಲಿರುವ ತೊಡಕುಗಳ ನಿವಾರಣೆ ಹೀಗೆ ಸುಮಾರು ೨೮ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ. ಹೋರಾಟದಲ್ಲಿ ನಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರು/ಉಪಾಧ್ಯಕ್ಷರು/ ಮತ್ತು ಸರ್ವ ಸದಸ್ಯರು ಭಾಗವಹಿಸುವರು.
ವರದಿ :-ಮೊಹಮ್ಮದ್ ಗೌಸ್