ಹೊಸಪೇಟೆ(ವಿಜಯನಗರ) ನ್ಯೂಸ್(ಜಾಗೃತಿ ಬೆಳಕು)
ವಿಜಯನಗರ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ ನಿಮಿತ್ತ:ಮದ್ಯ ಮಾರಾಟ ನಿಷೇಧಿಸಿ ಡಿಸಿ ಅನಿರುದ್ಧ್ ಶ್ರವಣ್ ಆದೇಶ!
ವಿಜಯನಗರ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ ನಿಮಿತ್ತ ಜಿಲ್ಲಾದ್ಯಾಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆದ್ಯಾಂತ ಜು.09ರ ರಾತ್ರಿ 10ರಿಂದ ಜು.10ರಾತ್ರಿ 10ರವರೆಗೆ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್.ಪಿ ಅವರು ಆದೇಶಿಸಿದ್ದಾರೆ.
ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯನಗರ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಅಬಕಾರಿ ಉಪ ಆಯುಕ್ತರು, ಅಬಕಾರಿ ಇಲಾಖೆಯವರು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ವರದಿ :-ಮೊಹಮ್ಮದ್ ಗೌಸ್