ವಿಜಯನಗರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶಾಸಕರಿಂದ ಸಚಿವರಿಗೆ ಮನವಿ

0
267

ವಿಜಯನಗರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶಾಸಕರಿಂದ ಸಚಿವರಿಗೆ ಮನವಿ

ಹೊಸಪೇಟೆ (ವಿಜಯನಗರ) ಜಾಗೃತಿ ಬೆಳಕು

ಐತಿಹಾಸಿಕ ವಿಜಯನಗರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ,‌ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್. ಆರ್. ಗವಿಯಪ್ಪ ಅವರು ಸೆಪ್ಟೆಂಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.ವಿಜಯನಗರ ಜಿಲ್ಲೆಯು ಪ್ರಾಕೃತಿಕವಾಗಿ ತನ್ನದೇ ವಿಶೇಷತೆಯನ್ನು ಹೊಂದಿದೆ. ಹಂಪಿಯು ಜಾಗತಿಕವಾಗಿ ಹೆಸರುವಾಸಿಯಾಗಿದೆ. ಪ್ರತಿ ದಿನ ಹಂಪಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಅಗಮಿಸುತ್ತಾರೆ. ಹಂಪಿ ಸುತ್ತಲು ಪ್ರಸಿದ್ಧ ಧಾರ್ಮಿಕ ತಾಣ ಅಂಜನಾದ್ರಿ, ಹುಲಗಿ ತಾಣಗಳಿವೆ. ಮೂರ್ನಾಲ್ಕು ರಾಜ್ಯಗಳಿಗೆ ನೀರುಣಿಸುವ ಜೀವನದಿ ತುಂಗಭದ್ರಾ ಇಲ್ಲಿದೆ. ಇಂತಹ ವಿಶೇಷತೆಯ ವಿಜಯನಗರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಅವಶ್ಯಕತೆ ಇದೆ ಎಂದು ಶಾಸಕರಾದ ಗವಿಯಪ್ಪ ಅವರು ಸಚಿವರಿಗೆ ಮನವರಿಕೆ ಮಾಡಿದರು.ಐತಿಹಾಸಿಕ ಹಂಪಿ ವ್ಯಾಪ್ತಿಯಲ್ಲಿ ಟೂರಿಸಂ ಪಾರ್ಕ್ ನಿರ್ಮಾಣ ಹಾಗೂ ಹೊಸಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಟೀಲ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆಶಾಸಕರು ಸಚಿವರಿಗೆ ಮನವಿ ಸಲ್ಲಿಸಿದರು.

ವರದಿ :ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here