ವಿಜಯನಗರ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ,!

0
497

ಲೋಕಸಭಾ ಚುನಾವಣೆ-2024ರ ಮತ ಎಣಿಕೆ:

ಹೊಸಪೇಟೆ (ವಿಜಯನಗರ) ಜಾಗೃತಿ ಬೆಳಕು ನ್ಯೂಸ್

ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಸಂಬಂಧ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಜೂನ್ 04ರಂದು ಬೆಳಿಗ್ಗೆ 6 ಗಂಟೆಯಿಂದ ಜೂನ್ 05ರ ಬೆಳಿಗ್ಗೆ 06 ಗಂಟೆಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ 1973 ಸೆಕ್ಷನ್ ಕಲಂ 144 ರಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಜೂನ್ 4ರಂದು ಮತ ಎಣಿಕೆ ಕಾರ್ಯವು ಮುಕ್ತಾಯಗೊಂಡ ನಂತರ ಗೆದ್ದ ಪಕ್ಷಗಳು ವಿಜಯೋತ್ಸವವನ್ನು ಅದ್ದೂರಿಯಾಗಿ ನಡೆಸಿ ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತಕರ ಘಟನೆಗಳು ನಡೆಯುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲಾದ್ಯಂತ ವಿಜಯದ ಸಂಭ್ರಮಾಚರಣೆ ಮಾಡದಂತೆ ನಿಷೇಧಾಜ್ಞೆ ಹೊರಡಿಸಬೇಕು ಎನ್ನುವ ಕೋರಿಕೆಯನ್ನು ಪರಿಗಣಿಸಿ ಮತ ಎಣಿಕೆಯ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ವಿಜಯನಗರ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ 1973 ಸೆಕ್ಷನ್ ಕಲಂ 144 ರಡಿ ನಿಷೇಧಾಜ್ಞೆ ಜಾರಿಗೊಳಿಸುವುದು ಸೂಕ್ತವೆಂದು ಕಂಡುಬಂದಿರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತ ಎಣಿಕೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.
ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಪಟಾಕಿ ಸಿಡಿಸುವುದು, ಜಿಲ್ಲಾದ್ಯಂತ ವಿಜಯೋತ್ಸವವನ್ನು ಸಂಭ್ರಮಿಸುವುದು, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ, ವಾಹನ ಜಾಥಾ ರ‍್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು ಸಂಪೂರ್ಣವಾಗಿ ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 05 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ., ಶಸ್ತ್ರ ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಒಂದು ವೇಳೆ ಅಂತಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು., ಕಲ್ಲುಗಳನ್ನು, ಕಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ., ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ., ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು, ಬಂದ್ ಪ್ರತಿಭಟನೆ, ಮುಷ್ಕರ, ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಹಾನಿಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳು ನಿಷೇಧಿಸಿದೆ., ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ., ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ, ಅನ್ವಯಿಸುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here