ವಿಜಯನಗರ ಜಿಲ್ಲೆಯ 142 ಶಾಲೆಗಳಲ್ಲಿ ಎಲ್‌ಕೆಜಿ,ಯುಕೆಜಿ ತರಗತಿ ಪ್ರಾರಂಭ: ಡಾ.ಆಕಾಶ.ಎಸ್

0
125
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 43;

ಹೊಸಪೇಟೆ ವಿಜಯನಗರ. ಜಾಗೃತಿ ಬೆಳಕು ನ್ಯೂಸ್

  ರಾಜ್ಯ ಸರ್ಕಾರವು ಕಲಬುರಗಿ ವಿಭಾಗದ 1,008 ಆಯ್ದೆ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ-ಯು.ಕೆ.ಜಿ. ತರಗತಿಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ 142 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ-ಯು.ಕೆ.ಜಿ.) ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಎಸ್. ತಿಳಿಸಿದ್ದಾರೆ.

ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೆ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆAಬ ಸದುದ್ದೇಶದಿಂದ ರಾಜ್ಯ ಸರ್ಕಾರವು ಪ್ರಸಕ್ತ 2024-25ನೇ ಸಾಲಿನಲ್ಲಿ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ-ಯು.ಕೆ.ಜಿ.) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿದ್ದು, ಅದರಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್.ಕೆ.ಜಿ-ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ.

ಸರ್ಕಾರದ ಆದೇಶ ದಿನಾಂಕ: 11.06.2024ರ ಪ್ರಕಾರ ಬೀದರ ಜಿಲ್ಲೆಯಲ್ಲಿ 98, ಬಳ್ಳಾರಿಯಲ್ಲಿ 119, ಕಲಬುರಗಿಯಲ್ಲಿ 234, ಕೊಪ್ಪಳದಲ್ಲಿ 131, ರಾಯಚೂರಿನಲ್ಲ್ಲಿ 190, ವಿಜಯನಗರದಲ್ಲಿ 142 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 94 ಸೇರಿದಂತೆ ಒಟ್ಟಾರೆ ವಿಭಾಗದ 1,008 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ಅನುಮತಿ ದೊರೆತಿದೆ. ಆರಂಭಿಕ ಹಂತದಿ0ದಲೇ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಅರ್ಹ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಮೂಲಕ ಮಕ್ಕಳಿಗೆ ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ “ಆರಂಭಿಕ ಶಿಕ್ಷಣದ” ಸೌಲಭ್ಯವನ್ನು ಕಲ್ಪಿಸಿಕೊಡುವುದು ಸರ್ಕಾರದ ಅಭಿಲಾಷೆಯಾಗಿದೆ. ಇದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರಾಧೇಶಿಕ ಅಭಿವೃದ್ಧಿ ಮಂಡಳಿಯು ಸಹ “ಅಕ್ಷರ ಆವಿಷ್ಕಾರ” ಕಾರ್ಯಕ್ರಮದ ಮೂಲಕ ಕೈಜೋಡಿಸಿದೆ.

ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಲ್.ಕೆ.ಜಿ-ಯು.ಕೆ.ಜಿ ತರಗತಿಗಳು ನಡೆಯುತ್ತಿವೆ. ಅಲ್ಲಿ ದಾಖಲಾದ ಮಕ್ಕಳ ವಿವರಗಳನ್ನು ಅವಲೋಕಿಸಿದಾಗ, ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಅದರ ಸಂಖ್ಯೆ ತೀರಾ ಕಡಿಮೆ ಇದೆ ಎಂಬುದು ಅಂಕಿ-ಸAಖ್ಯೆಯಿAದ ಗೊತ್ತಾಗುತ್ತದೆ. ಬೆಂಗಳೂರು ವಿಭಾಗದಲ್ಲಿ 3,073 ಶಾಲೆಗಳಲ್ಲಿ ಅತೀ ಹೆಚ್ಚು 1,71,523 ಮಕ್ಕಳು ಪ್ರವೇಶ ಪಡೆದರೆ, ಕಲಬುರಗಿ ವಿಭಾಗದಲ್ಲಿ 967 ಶಾಲೆಗಳಲ್ಲಿ 32,805 ಅತೀ ಕಡಿಮೆ ಮಕ್ಕಳು ಪ್ರವೇಶಾತಿ ಪಡೆಯುತ್ತಿದ್ದಾರೆ. ಧಾರವಾದ ವಿಭಾಗದಲ್ಲಿ 1,102 ಶಾಲೆಗಳಲ್ಲಿ 48,805 ಮಕ್ಕಳು ಮತ್ತು ಮೈಸೂರು ವಿಭಾಗದಲ್ಲಿ 1,099 ಶಾಲೆಗಳಲ್ಲಿ 57,569 ಮಕ್ಕಳು ಎಲ್.ಕೆ.ಜಿ-ಯು.ಕೆ.ಜಿ. ಪ್ರವೇಶಾತಿ ಪಡೆಯುತ್ತಿದ್ದಾರೆ. ಇನ್ನು ಅಂಗನವಾಡಿಗಳಲ್ಲಿ 6 ತಿಂಗಳಿನಿಂದ 6 ವರ್ಷ ವರೆಗಿನ ಮಕ್ಕಳ ದಾಖಲಾತಿ ಪ್ರಮಾಣ ನೋಡಿದಾಗ ಬೆಂಗಳೂರು ವಿಭಾಗದಲ್ಲಿ ಶೇ.40.94, ಧಾರವಾಡ ವಿಭಾಗದಲ್ಲಿ ಶೇ.61.61, ಮೈಸೂರು ವಿಭಾಗದಲ್ಲಿ ಶೇ.34.48 ಹಾಗೂ ಕಲಬುರಗಿ ವಿಭಾಗದಲ್ಲಿ ಅತಿ ಹೆಚ್ಚು ಶೇ.70.93 ರಷ್ಟು ಮಕ್ಕಳು ಅಂಗನವಾಡಿ ಕೇಂದ್ರದ ಮೇಲೆ ಅವಲಂಬಿತರಾಗಿದ್ದಾರೆ. ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭದಿಂದ  ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂಗನವಾಡಿ ಮೇಲಿನ ಹೊರೆ ಸಹ ತಪ್ಪಲಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಅನುದಾನದ ನಿರೀಕ್ಷೆ: ಪೂರ್ವ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಕ್ರಿಯಾತ್ಮಕ ಚಟುವಟಿಕೆ ಸೇರಿದಂತೆ ಇನ್ನಿತರ ಮಾನದಂಡ ಅಧರಿಸಿ ಕೇಂದ್ರ ಸರ್ಕಾರವು ಅಂತಹ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಪ್ರೊಜೆಕ್ಟ್ ಅಪ್ರೂವಲ್ ಬೋರ್ಡ್ನಿದ ಅನುಮೋದನೆ ನೀಡಿ ಹೆಚ್ಚಿನ ಅನುದಾನ ನೀಡುತ್ತದೆ. ಆ ಮೂಲಕ ರಾಜ್ಯದ ಮಕ್ಕಳಿಗೆ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ದೊರೆಯಲು ಸಹಕಾರಿಯಾಗುವುದಲ್ಲದೆ ರಾಜ್ಯ ಸರ್ಕಾರದ ಜೊತೆ ಕೇಂದ್ರ ಸರ್ಕಾರ ಅನುದಾನ ಸಹ ಬರಲಿದೆ ಎಂದು ಡಾ.ಆಕಾಶ ಎಸ್. ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ಹಾಗೂ ಆಯಾಗಳ ನೇಮಕಾತಿ: ರಾಜ್ಯ ಸರ್ಕಾರ ಕಲಬುರಗಿ ವಿಭಾಗದ 1,008 ಆಯ್ದೆ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ-ಯು.ಕೆ.ಜಿ. ತರಗತಿಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪೂರ್ವ ಪ್ರಾಥಮಿಕ ಹಂತಕ್ಕೆ ಶಾಲಾ ಹಂತದಲ್ಲಿಯೆ ನಿಯಮಾನುಸಾರ ಅತಿಥಿ ಶಿಕ್ಷಕರ ಮತ್ತು ಮಕ್ಕಳ ಪಾಲನೆಗೆ ಆಯಾ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 ನಗರದ ಪುಣ್ಯ ಮೂರ್ತಿ ರಾಘಪ್ಪ  ಶೆಟ್ಟಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಿಸಿದರು  ಮಕ್ಕಳನ್ನು ಸ್ವಾಗತಿಸುವ ಮೂಲಕ  ಸರ್ಕಾರದ ಈ ಒಂದು ಯೋಜನೆಯನ್ನು ಪೋಷಕರು ತಮ್ಮ ಮಕ್ಕಳಿಗೆ ಒದಗಿಸುವ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸಬೇಕು ಶಾಲೆಯ ಮುಖ್ಯೋಪಾಧ್ಯಾಯರು ವರಪ್ರಸಾದ್ ಕಂಪ್ಲಿ ಅವರು  ಪೋಷಕರಲ್ಲಿ ಮನವಿ ಮಾಡಿದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here