ಅಮೃತ ಭಾರತಿಗೆ ಕನ್ನಡದಾರತಿ ಭವ್ಯ ಮೆರವಣಿಗೆ ನೋಡಲು ಆಕರ್ಷಕ.!!

0
206

ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಭವ್ಯ ಮೆರವಣಿಗೆಯಲ್ಲಿ ನಾಡಿನ ಸಂಸ್ಕೃತಿ ಅನಾವರಣ..

ಹೊಸಪೇಟೆ ವಿಜಯನಗರ 75ನೇ ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊಸಪೇಟೆ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ನಿಮಿತ್ತ ಏರ್ಪಡಿಸಿದ್ದ ಭವ್ಯ ಮೆರವಣಿಗೆಯಲ್ಲಿ ನಾಡಿನಸಂಸ್ಕೃತಿಯೇ ಅನಾವರಣಗೊಂಡಿತು.


ಹೊಸಪೇಟೆ ನಗರದ ವಡಕರಾಯನ ದೇವಸ್ಥಾನದಿಂದ ಆರಂಭವಾದ ಭವ್ಯ ಮೆರವಣಿಗೆಗೆ ಸಂಸದ ವೈ.ದೇವೇಂದ್ರಪ್ಪ ಅವರು ಶ್ರೀ ಭಾರತಾಂಭೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು.
ವಡಕರಾಯ ದೇವಸ್ಥಾನದಿಂದ ಆರಂಭವಾಗಿ ಮುನ್ಸಿಪಲ್ ಮೈದಾನದವರಗೆ ಮೆರವಣಿಗೆ ಕಾರ್ಯಕ್ರಮ ನಡೆಯಿತು. ಕುಂಭ ಹೊತ್ತ ಮಹಿಳೆಯರು, ಸ್ಥಳೀಯ ಕಲಾವಿದರು, ಕಲಾತಂಡಗಳ ಕಲಾವಿದರು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವೀರಗಾಸೆ, ಗೊಂಬೆಕುಣಿತ, ಕಂಸಾಳೆ, ಡೊಳ್ಳು ಕುಣಿತ, ಹಲಗೆ ವಾದನ, ಕಹಳೆ ವಾದನ, ಹಗಲುವೇಷಗಾರಿಕೆ ಸೇರಿದಂತೆ ವಿವಿಧ ಕಲಾ ಪ್ರಕಾರಗಳನ್ನು ಕಲಾವಿದರು ಪ್ರದರ್ಶಿಸಿದರು.


ಕೃಷಿ ಇಲಾಖೆ ಮಾಹಿತಿ ರಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಶು ಸಂಗೋಪನೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಕ್ಕರೆ ಕಾಯಿಲೆ, ಮಗುವನ್ನು ಬೆಚ್ಚಗೆ ಇಡಲು ಕಾಂಗರೂ ಆರೈಕೆ ವಿಧಾನ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ದಂತ ಭಾಗ್ಯ ಯೋಜನೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ವಿವಿಧ ಯೋಜನೆ ಮಾಹಿತಿ ಕುರಿತು ನಾಮಫಲಕಗಳನ್ನು ತೆರೆದ ವಾಹನಗಳಲ್ಲಿ ಪ್ರದರ್ಶಿಸಲಾಯಿತು.
ಮೆರವಣಿಗೆಯು ವಡಕರಾಯನ ದೇವಸ್ಥಾನದಿಂದ ಆರಂಭವಾಗಿ ಮುಖ್ಯ ಮಾರುಕಟ್ಟೆ, ಗಾಂಧಿ ವೃತ್ತ, ಮುಖ್ಯ ಬಸ್ ನಿಲ್ದಾಣ, ಶ್ಯಾನಭಾಗ್ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಮುನ್ಸಿಪಲ್ ಮೈದಾನದವರೆಗೆ ನಡೆಯಿತು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸುಂಕಮ್ಮ,ತಹಶೀಲ್ದಾರ್ ವಿಶ್ವಜೀತ್ ಮೆಹೆತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೊಟ್ರೇಶ ಅವರು ಇದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here