ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಸಾಲ ಸಹಾಯಧನ: ಅರ್ಜಿ ಆಹ್ವಾನ,

0
147

ಜಾಗೃತಿ ಬೆಳಕು ನ್ಯೂಸ್.ಹೊಸಪೇಟೆ (ವಿಜಯನಗರ)

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ವಯಂ ಉದ್ಯೋಗ ಸಾಲ ಸಹಾಯಧನ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತಿಯ ಅಲ್ಪಸಂಖ್ಯಾತ(ಮುಸ್ಲಿA, ಕ್ರಿಶ್ಚಿಯನ್, ಜೈನ, ಭೌದ್ದ, ಸಿಖ್ಖ, ಪಾರ್ಸಿ) ರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಲ್ಲಿ ಮತಿಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಭೌದ್ದ, ಸಿಖ್ಖ, ಪಾರ್ಸಿ ಸಮುದಾಯಕ್ಕೆ ಸೇರಿದಂತೆ ಅರ್ಹ ಅಭ್ಯರ್ಥಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಸಹಾಯೋಗದೊಂದಿಗೆ ಘಟಕ ವೆಚ್ಚದ ಶೇ.33ರಷ್ಟು ಅಥವಾ ಗರಿಷ್ಟ ಮಿತಿ ರೂ.1 ಲಕ್ಷಗಳ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ.81 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1 ಲಕ್ಷ 3 ಸಾವಿರಕ್ಕೆ ಮೀರಬಾರದು. ಅರ್ಜಿದಾರರ ವಯಸ್ಸು ಕನಿಷ್ಠ 18 ರಿಂದ 55 ವರ್ಷದೊಳಗಿರಬೇಕು. ಈ ಯೋಜನೆಯಡಿ ಶೇ.33ರಷ್ಟು ಮಹಿಳೆಯರಿಗೆ ಹಾಗೂ ಶೇ.3ರಷ್ಟು ಅಂಗವಿಕಲರಿಗೆ ಮೀಸಲಾತಿ ಇರುತ್ತದೆ. ಈ ಇಂದೆ ನಿಗಮದ ಸೌಲಭ್ಯ ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.

ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನಾ ವರದಿ, ಅರ್ಜಿದಾರರ ಮತ್ತು ಜಾಮೀನುದಾರರ 2 ಭಾವಚಿತ್ರಗಳೊಂದಿಗೆ ವೆಬ್ ಸೈಟ್ http://kmdconline.karnataka.gov.in/ ನಲ್ಲಿ ಅರ್ಜಿ ಸಲ್ಲಿಸಲು ಫೆ.29 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಕೊಠಡಿ ಸಂಖ್ಯೆ 06, ಮೊದಲನೇ ಮಹಡಿ, ತಾಲೂಕು ಕಚೇರಿ, ಹೊಸಪೇಟೆ-583201 ಅಥವಾ ದೂ.ಸಂ: 8277944207 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ತಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ :- ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here