ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಜೂ.19ರಿಂದ

0
220

ಹೊಸಪೇಟೆ :- ಜಾಗೃತಿ ಬೆಳಕು ( ಬ್ರೇಕಿಂಗ್ ನ್ಯೂಸ್)

ನೂತನ ವಿಜಯನಗರ ಜಿಲ್ಲೆ ಆದಮೇಲೆ ಕಾಂಗ್ರೆಸ್ ಪಕ್ಷದಿಂದ ಮೊಟ್ಟಮೊದಲ ಬಾರಿಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಜೂ.19 ರಿಂದ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂ.19ರ ಸೋಮವಾರ ಸಂಜೆ 5.30ಕ್ಕೆ ಜಿಲ್ಲಾ ಕೇಂದ್ರ ಹೊಸಪೇಟೆಗೆ ಆಗಮಿಸಲಿದ್ದು, ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂ.20ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಕೈಗೊಂಡು, ಮಧ್ಯಾಹ್ನ 3 ಗಂಟೆಗೆ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಾಮಗಾರಿ ಹಾಗೂ 250 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ.

ಜೂ.21ರ ಬುಧವಾರ ವಿಶ್ವವಿಖ್ಯಾತ ಹಂಪಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯ ಸ್ಥಳ ಪರಿಶೀಲನೆ ನಡೆಸಿ ನಂತರ ತೋರಣಗಲ್ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ನಗರದಲ್ಲಿ ಒಳಚರಂಡಿ ಕಾಮಗಾರಿಕೆ. ಕುಡಿಯುವ ನೀರಿನ ಸಮಸ್ಯೆ. ಯುಜಿಡಿ ಸೇರಿದಂತೆ ಹಲವಾರು ಸಮಸ್ಯೆಗಳಿವೆ ಎಂದು ಜನಸಾಮಾನ್ಯರ ಮನೆ ಮನೆಮಾತಾಗಿತ್ತು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here