ಕಮಲಾಪುರ: ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನ ನಿಷೇಧ!

0
206

ಹೊಸಪೇಟೆ(ವಿಜಯನಗರ) ಜಾಗೃತಿ ಬೆಳಕು

ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದೆ ಎಂದು ಕಮಲಾಪುರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ನಾಗೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪಾಸ್ಟಿಕ್ ಬ್ಯಾನರ್, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್‍ಗಳು, ಪ್ಲಾಸ್ಟಿಕ್ ಸ್ಪೂನ್‍ಗಳು, ಅಂಟಿಕೊಳ್ಳುವ ಫಿಲ್ಮಗಳು ಹಾಗೂ ಎಲ್ಲಾ ದಪ್ಪದ ಡೈನಿಂಗ್ ಟೇಬಲ್ ಮೇಲೆ ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಈಗಾಗಲೇ ನಿಷೇಧಿಸಿದ್ದು, ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ(ಒoಇಈಅಅ), ನವದೆಹಲಿ ಅವರು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ತಿದ್ದುಪಡಿ ನಿಯಮಗಳು 2021ರಲ್ಲಿ ನಿಷೇಧಿತ ಉತ್ಪನ್ನಗಳ ಜೊತೆಗೆ ಹೆಚ್ಚುವರಿ ವಸ್ತುಗಳನ್ನು ಜುಲೈ 2022ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಿಷೇಧಿಸಿದ ಹೆಚ್ಚುವರಿ ಉತ್ಪನ್ನ ವಸ್ತುಗಳು ಪ್ಲಾಸ್ಟಿಕ್ ಸ್ಟಿಕ್‍ಗಳೊಂದಿಗೆ, ಇಯರ್ ಬಡ್ಸ್‍ಗಳು, ಬಲೂನ್‍ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕರ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕರ್‍ಗಳು, ಪ್ಲಾಸ್ಟಿಕ್ ಐಸ್ ಕ್ರೀಂ ಸ್ಟಿಕ್‍ಗಳು, ಅಲಂಕಾರಕ್ಕಾಗಿ ಬಳಸುವ ಪಲಿಸ್ಟೆರಿನ್(ಥರ್ಮಾಕೋಲ್) ಹಾಗೂ ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಕಪ್‍ಗಳು, ಲೋಟಗಳು ಫೋರ್ಕ್‍ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇ ಗಳಂತಹ ಕಟ್ಲರಿಗಳು, ಸ್ಟ್ರೀಟ್ ಬಾಕ್ಸ್‍ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಮ್‍ಗಳು, ಆಮಂತ್ರಣ ಪತ್ರಗಳು, ಸಿಗರೇಟ್ ಪ್ಯಾಕೇಟ್‍ಗಳು, 100 ಮೈಕ್ರಾನ್‍ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಬ್ಯಾನರ್ ಗಳು , ಪ್ಲಾಸ್ಟಿಕ್ ಸ್ಟಿಕರ್ ಗಳನ್ನು ನಿಷೇಧಿಸಲಾಗಿದೆ.
ಪ್ಲಾಸ್ಟಿಕ್ ನಿಷೇಧವನ್ನು ಉಲ್ಲಂಘಿಸಿ ಉಗ್ರಾಣದಲಿ ಸಂಗ್ರಹಿಸಿದ್ದಲ್ಲ್ಲಿ ಮೊದಲನೇ ಬಾರಿಗೆ 5ಸಾವಿರದಿಂದ 20ಸಾವಿರದವರೆಗೆ, ಪುನರಾವರ್ತನೆಯಾದಲ್ಲಿ 30ಸಾವಿರ ರೂಪಾಯಿ, ಪ್ಲಾಸ್ಟಿಕ್ ಮಾರಾಟ ಮಾಡಿದ್ದಲ್ಲಿ ಮೊದಲನೇ ಬಾರಿಗೆ 2ಸಾವಿರದಿಂದ 10ಸಾವಿರದವರೆಗೆ, ಪುನರಾವರ್ತನೆಯಾದಲ್ಲಿ 20ಸಾವಿರ ರೂ, ಜನ ಸಂದಣಿ ಆಗುವ ಮಾರ್ಕೆಟ್‍ನಲ್ಲಿ ಪ್ಲಾಸ್ಟಿಕ್ ಬಳಸಿದ್ದಲ್ಲಿ ಮೊದನೇ ಬಾರಿಗೆ 200ರಿಂದ 1ಸಾವಿರದವರೆಗೆ ಪುನರಾವರ್ತನೆಯಾದಲ್ಲಿ 2ಸಾವಿರ ರೂ. ದಂಡಗಳನ್ನು ವಿಧಿಸಲಾಗುವುದು, ಈ ದಂಡದ ಜೊತೆಗೆ ಪರಿಸರ ಸಂರಕ್ಷಣಾ ಕಾಯ್ದೆಯ ಅನ್ವಯ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here