ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ

0
137

ಹೊಸಪೇಟೆ (ವಿಜಯನಗರ) ಜಾಗೃತಿ ಬೆಳಕು

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಸೆಪ್ಟೆಂಬರ್ 17ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್ ಅವರು ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೊಂಗ್ಜಾಯ್ ಮೊಹಮ್ಮದ್ ಅಕ್ರಮ ಅಲಿ ಷಾ, ಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು 

ತಾಲ್ಲೂಕು ಆಡಳಿತದಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೊಸಪೇಟೆ ತಹಶೀಲ್ದಾರರಾದ ಶೃತಿ ಎಂ.ಎ. ಅವರು ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರರಾದ ವೆಂಕಟೇಶ, ಶಿರಸ್ತೆದಾರರಾದ ಶ್ರೀಧರ್ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ :ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here