ನಾಗರೀಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ,!

0
900

ಜಾಗೃತಿ ಬೆಳಕು :- ಹೊಸಪೇಟೆ

ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರೀಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್. ಅವರು ತಿಳಿಸಿದ್ದಾರೆ.
ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಆ.21ರಿಂದ ಆ.27ರವರೆಗೆ ಪುನೀತ್ ರಾಜಕುಮಾರ ಕ್ರೀಡಾಂಗಣ, ಕೂಡ್ಲಿಗಿ ಮತ್ತು ಹರಪನಹಳ್ಳಿ ಉಪ ವಿಭಾಗ ವ್ಯಾಪ್ತಿಯಲ್ಲಿ ಆ.28ರಿಂದ ಸೆ.03ರವರೆಗೆ ಹಗರಿಬೊಮ್ಮನಹಳ್ಳಿಯ ಸರ್ಕಾರಿ ಕಾಲೇಜು ಮೈದಾನದಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರು ಹತ್ತಿರದ ಪೊಲೀಸ್ ಠಾಣೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ತಮ್ಮ ವಿಳಾಸದ ಸರಹದ್ದಿನ ಪೊಲೀಸ್ ಠಾಣೆಗೆ ಆ.15ರೊಳಗೆ ಸಲ್ಲಿಸಬಹುದಾಗಿದೆ.

ನಾಗರೀಕ ಬಂದೂಕು ತರಬೇತಿ ಪಡೆಯಲು ಇರುವ ನಿಬಂಧನೆಗಳು:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಾಸ್‌ಪೋರ್ಟ್ ಅಳತೆಯ 3 ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು, 21ವರ್ಷ ಮೇಲ್ಪಟ್ಟ ಅಭ್ಯರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತದೆ. ಭಾಗವಹಿಸುವ ನಾಗರೀಕರು ನಿಯಮಿತವಾಗಿ ತರಬೇತಿಗೆ ಹಾಜರಾಗುವುದು ಹಾಗೂ ಶಿಸ್ತು ಪಾಲಿಸಬೇಕು. ತರಬೇತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಶೂಗಳನ್ನು ಧರಿಸಬೇಕು. ಲುಂಗಿ, ಪಂಚೆ ಧರಿಸಲು ಅವಕಾಶವಿರುವುದಿಲ್ಲ, ತರಬೇತಿ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಮದ್ದುಗುಂಡುಗಳ ಶುಲ್ಕವನ್ನು ಭರಿಸಬೇಕು. ತರಬೇತಿ ಪಡೆಯುವ ಅಭ್ಯರ್ಥಿಗಳು ದೃಷ್ಟಿದೋಷ ಹೊಂದಿರಬಾರದು ಹಾಗೂ ಮಾನಸಿಕ ಮತ್ತು ದೈಹಿಕವಾಗಿ ಯೋಗ್ಯರಾಗಿರಬೇಕು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಯಾವುದೇ ನಾಗರೀಕ ಅರ್ಜಿಯನ್ನು ತಿರಸ್ಕರಿಸುವ ಅಥವಾ ಪುರಸ್ಕರಿಸುವ ಅಧಿಕಾರವನ್ನು ಹೊಂದಿರುತ್ತಾರೆ, ತರಬೇತಿ ಅಭ್ಯರ್ಥಿಗಳು ತರಬೇತಿ ವೇಳೆ ಸಣ್ಣ ನೋಟ್ ಪುಸ್ತಕ ಮತ್ತು ಪೆನ್ ತರತಕ್ಕದ್ದು ಹಾಗೂ ತರಬೇತಿ ಕೊನೆಯಲ್ಲಿ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here