ಪಡಿತರ ದಾನ್ಯ ಮಾರಾಟ ಮಾಡಿದರೆ ಕಾನೂನು ಕ್ರಮ,!!

0
121

ಹೊಸಪೇಟೆ (ವಿಜಯನಗರ) ಜಾಗೃತಿ ಬೆಳಕು

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಲ್ಲಿ ವಿತರಿಸುವ ಆಹಾರ ದನ್ಯಾಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ, ಪಡಿತರ ಚೀಟಿಯನ್ನು ಅಮಾನತ್ತಿನಲ್ಲಿಟ್ಟು, ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿದ್ದಾರೆ.
ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ. ರಾಗಿ ಹಾಗೂ ಆದ್ಯತಾ ಪಡಿತರ ಚೀಟಿ ಯಲ್ಲಿನ ಪ್ರತಿ ಸದಸ್ಯರಿಗೆ 3 ಕೆ.ಜಿ. ಸಾರವರ್ಧಿತ ಅಕ್ಕಿ ಮತ್ತು 2 ಕೆ.ಜಿ ರಾಗಿ ಆಹಾರ ಧಾನ್ಯವನ್ನು ಘನ ಸರ್ಕಾರದಿಂದ ಪ್ರತಿ ಮಾಹೆ ಉಚಿತವಾಗಿ ವಿತರಿಸಲಾಗುತ್ತಿದೆ.
ಆದ್ದರಿಂದ, ಜಿಲ್ಲೆಯಲ್ಲಿನ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಯಾವುದೇ ಕಾರಣಕ್ಕೂ ಹಣದ ಆಮಿಷಕ್ಕೆ ಒಳಗಾಗಿ ಅನಧಿಕೃತವಾಗಿ ಮಾರಾಟ ಅಥವಾ ಅಕ್ರಮವಾಗಿ ಸಂಗ್ರಹಣೆ ಮಾಡಬಾರದೆಂದು ಪಡಿತರ ಚೀಟಿದಾರರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆ ತಿಳಿದೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here