ಯುವಕರು ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಸಚಿವ ಆನಂದ್ ಸಿಂಗ್!!

0
209

ಹೊಸಪೇಟೆ(ವಿಜಯನಗರ ಜಿಲ್ಲೆ),(ಜಾಗೃತಿ ಬೆಳಕು)

ವಿಜಯನಗರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಜಿಲ್ಲಾಡಳಿತದ ವತಿಯಿಂದ ಬೃಹತ್ ಜಾಥಾ!!
ಯುವಕರು ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಸಚಿವ ಆನಂದ್ ಸಿಂಗ್,

ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಹೊಸಪೇಟೆ ನಗರದಲ್ಲಿ ಶನಿವಾರ ಬೃಹತ್ ಜಾಥಾ ನಡೆಯಿತು.
ಜಾಥಾವು ಹೊಸಪೇಟೆ ನಗರಸಭೆಯಿಂದ ಆರಂಭವಾಗಿ ಅಪ್ಪುಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ಜಾಥಾ ಉದ್ದಕ್ಕೂ ದೇಶಭಕ್ತಿ ಘೋಷಣೆಗಳು ಮೊಳಗಿದವು.
ಸಾರ್ವಜನಿಕರು ಹಾಗೂ ಸರಕಾರಿ ನೌಕರರು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಸಾಗಿದರು.
ಬೃಹತ್ ಜಾಥಾಗೆ ಚಾಲನೆ ನೀಡಿದ ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಅವರು ವಿಶ್ವದಲ್ಲಿಯೇ ಭಾರತವು ಅತೀ ಹೆಚ್ಚು ಯುವಕರನ್ನು ಒಳಗೊಂಡಂತಹ ದೇಶವಾಗಿದೆ. ಯುವಕರು ತಮ್ಮ ಯೌವ್ವನವನ್ನು ದೇಶ ಪ್ರೇಮಕ್ಕಾಗಿ ಬಳಸಿಕೊಳ್ಳಬೇಕು ಮತ್ತು ದೇಶ ಪ್ರೇಮ ಬೆಳಸಿಕೊಳ್ಳಬೇಕು ಎಂದರು.
ಭಾರದ ದೇಶದ ಸ್ವಾತಂತ್ರ್ಯಕ್ಕಾಗಿ ಎಷ್ಟೋ ಮಹಾನುಭಾವರು ಮತ್ತು ಮಹನಿಯರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್, ಸರ್ದಾರ್ ವಲ್ಲಭಬಾಯಿ ಪಟೇಲ್, ಜವಾಹರಲಾಲ್ ನೆಹರು, ಬಾಲಗಂಗಾಧರ ತಿಲಕ್, ಝಾನ್ಸಿರಾಣಿ ಲಕ್ಷ್ಮೀಬಾಯಿ ಹಾಗೂ ಮುಂತಾದ ಮಹಾನುಭಾವರ ತ್ಯಾಗ ಬಲಿದಾನಗಳ ಪ್ರತೀಕವೇ ಸ್ವಾತಂತ್ರ್ಯ ಎಂದು ಹೇಳಿದರು.


ಈಗಿನ ಯುವಕರು ನೆನಪಿಸಿಕೊಳ್ಳಬೇಕಾದ ಸಂಗತಿಯೆಂದರೆ ಚಂದ್ರಶೇಖರ್ ಅಜಾದ್, ಭಗತ್‍ಸಿಂಗ್ ಅವರು ಚಿಕ್ಕ ವಯಸ್ಸಿನಲ್ಲಿಯೇ ಗಲ್ಲಿಗೆ ಶರಣಾದವರು ಅಂತಹವರ ಆಶಾ-ಮನೋಭಾವನೆಗಳನ್ನು ಯುವ ಪೀಳಿಗೆಯು ಬೆಳೆಸಿಕೊಳ್ಳಬೇಕು ಹಾಗೂ ದೇಶ ಪ್ರೇಮ ಹೊಂದಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಪಿ.ಶ್ರವಣ್, ಜಿಪಂ ಸಿಇಒ ಬೋಯರ್ ಹರ್ಷಲ್ ನಾರಾಯಣ್‍ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ನಗರಸಭೆಯ ಅಧ್ಯಕ್ಷೆ ಸುಂಕಮ್ಮ, ನಗರಸಭೆಯ ಸದಸ್ಯರು ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here