ಲೋಕಸಭಾ ಚುನಾವಣೆ: ವಿಶೇಷಚೇತನರಿಂದ ಮತದಾನ ಜಾಗೃತಿ

0
190

ಜಾಗೃತಿ ಬೆಳಕು (ನ್ಯೂಸ್ ) ಹೊಸಪೇಟೆ (ವಿಜಯನಗರ)

ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರ ಸಭೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಇವರ ಸಂಯುಕ್ತಾಶ್ರಯದಲ್ಲಿ ಏಪ್ರೀಲ್ 4 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷ ಚೇತನರ ಯಂತ್ರಚಾಲಿತ ತ್ರಿಚಕ್ರ ವಾಹನ ಜಾಥಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಹಸಿರು ನಿಶಾನೆ ತೋರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಿಶೇಷಚೇತನರು ನಡೆಸಿದ ಜಾಥಾವು ಪರಿಣಾಮಕಾರಿಯಾಗಿದೆ. ನಗರದ ನಿವಾಸಿಗಳು ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡುವಂತೆ ಪ್ರೇರಣೆ ನೀಡುವಲ್ಲಿ ಸಹಕಾರಿಯಾಗಿದೆ. ಈ ಬಾರಿ ಹೊಸಪೇಟೆ ನಗರ ವ್ಯಾಪ್ತಿಯಲ್ಲಿ ಶೇ.80 ರಿಂದ ಶೇ.90ರಷ್ಟು ಮತದಾನದ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು. ವಿಶೇಷಚೇತನರು ಜಿಲ್ಲೆಯ ಇನ್ನಿತರ ನಗರ ಪ್ರದೇಶದಲ್ಲಿ ಸಹ ಬೈಕ್ ಜಾಥಾ ಕಾರ್ಯಕ್ರಮ ನಡೆಸಲು ಸಲಹೆ ಮಾಡಿದರು.

ನಗರಸಭೆ ಆಯುಕ್ತರಾದ ಚಂದ್ರಪ್ಪ, ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವಿನಾಶಲಿಂಗ ಗೋತಿಖಿಂಡಿ, ಯೋಜನಾ ಅಂಕ ಮೌಲ್ಯಮಾಪನಾಧಿಕಾರಿ ಪತ್ರಿಬಸಪ್ಪ ಎನ್.ಕೆ., ಜಿಲ್ಲಾ ಪಂಚಾಯತ್ ಸಹಾಯಕ ಶಿಶು ಅಭವೃದ್ಧಿ ಅಧಿಕಾರಿ ಶ್ರೀಮತಿ ಅಂಬುಜಾ, ಸಾಧ್ಯ ಸಂಸ್ಥೆಯ ಮುಖ್ಯಸ್ಥರಾದ ಆರತಿ, ಎಲ್ಲಾ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತರು, ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಭಾವಹಿಸಿದ್ದರು.ಸುಮಾರು 100ಕ್ಕು ಹೆಚ್ಚು ವಿಶೇಷಚೇತನರು ತ್ರಿಚಕ್ರ ವಾಹನ ಮತ್ತು ದ್ವಿಚಕ್ರ ವಾಹನಗಳ ಮೂಲಕ ಜಾಥಾದಲ್ಲಿ ಭಾಗವಹಿಸಿ ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಿದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here