ವಿಜಯನಗರ: ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಆಚರಣೆ

0
249

ವಿಜಯನಗರ: ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಆಚರಣೆ.

ಹೊಸಪೇಟೆ:- ಜಾಗೃತಿ ಬೆಳಕು

ಅ,23, ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಹೋರಾಟಗಾರ್ತಿ ವೀರ ವನಿತೆ ಕಿತ್ತೂರುರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಭಾನುವಾರದಂದು ಕೊಟ್ಟೂರುಸ್ವಾಮಿ ಮಠದಲ್ಲಿ ಸರಳವಾಗಿ ಆಚರಿಸಲಾಯಿತು.


ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಜಂಭುನಾಥ ರಸ್ತೆ ಹತ್ತಿರದ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲೆ ಆವರಣದಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ನಂತರ ಕೊಟ್ಟೂರುಸ್ವಾಮಿ ಮಠದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎಲ್ಲಾರಿಗೂ ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯ ಶುಭಾಶಯಗಳನ್ನು ಕೋರಿದರು.


ಕಿತ್ತೂರುರಾಣಿ ಚೆನ್ನಮ್ಮ ಹುಟ್ಟಿದ ನಾಡಿನಲ್ಲಿ ಹುಟ್ಟಿದ ನಾವು ಅದೃಷ್ಟವಂತರು, ನಾವು ಕಿತ್ತೂರು ರಾಣಿ ಚೆನ್ನಮ್ಮನ ತರಹ ನಾವು ಯುದ್ದಮಾಡುವಂತಹ ಸ್ಥಿತಿ ಇಲ್ಲ. ನಾವು ಈಗ ಸ್ವತಂತ್ರರಾಗಿದ್ದು, ನಾವು ಯಾವುದೇ ರಂಗದಲ್ಲಿ ಯಾವುದೇ ಕೆಲಸ ಮಾಡಲಿ ಅತ್ಯಂತ ಶ್ರದ್ದೆ ಹಾಗೂ ಪ್ರಮಾಣಿಕವಾಗಿ ಮಾಡಿದರೆ, ನಾವು ದೇಶದ ಪ್ರಗತಿಗೆ ನೀಡುವ ಅತ್ಯಂತ ದೊಡ್ಡ ಕೊಡುಗೆಯಾಗುತ್ತದೆ ಎಂದು ಅವರು ಹೇಳಿದರು.
ಕಿತ್ತೂರುರಾಣಿ ಚೆನ್ನಮ್ಮ ಅವರ ಆದರ್ಶವನ್ನು ನಾವೆರಲ್ಲರೂ ರೂಡಿಸಿಕೊಳ್ಳಬೇಕು. ಮಹಿಳೆಯರನ್ನು ಸಬಲಿಕರಣಗೊಳಿಸಲಿಕ್ಕೆ ನಾವೆಲ್ಲರೂ ಸಹಕರಿಸಬೇಕು. ನಮಗೆ ಸಿಕ್ಕ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಉಪಸಭಾಪತಿ ಸವದತ್ತಿ ಶಾಸಕ ಆನಂದ ಮಾಮನಿ ಅವರು ವಿಧಿವಶರಾದ ಹಿನ್ನಲೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.
ಕೊಟ್ಟೂರು ಮಠದ ಜಗದ್ಗುರು ಶ್ರೀ ಬಸವಲಿಂಗಸ್ವಾಮಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಹೊಸಪೇಟೆ ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಕಿತ್ತೂರು ರಾಣಿ ಚೆನ್ನಮ್ಮ ಸಮಾಜದ ಮುಖಂಡರು, ಎಚ್.ಎನ್.ಎಫ್ ಮೊಹಮ್ಮದ್ ಇಮಾಮ ನಿಯಾಜಿ ಸಮಾಜ ಸೇವಕರು, ವೀರಶೈವ ಸಮಾಜದ ಮುಖಂಡರು ಸೇರಿದಂತೆ ಇತರರು ಇದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here