ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಜೂ.26ರಿಂದ

0
386

ಹೊಸಪೇಟೆ :-ಜಾಗೃತಿ ಬೆಳಕು ನ್ಯೂಸ್

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಜೂ.26 ರಿಂದ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜೂ.26ರ ಸೋಮವಾರ ಮಧ್ಯಾಹ್ನ 12.30ರಿಂದ 5.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಕೈಗೊಳ್ಳಲಿದ್ದಾರೆ.ಜೂ.27ರ ಮಂಗಳವಾರ ಬೆಳಿಗ್ಗೆ 10 ರಿಂದ 12.30 ರವರೆಗೆ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಹಾಗೂ 250 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ.ನಂತರ ಮಧ್ಯಾಹ್ನ 2.30ಕ್ಕೆ ವಿಶ್ವವಿಖ್ಯಾತ ಹಂಪಿಯಲ್ಲಿ ಜುಲೈ ತಿಂಗಳಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯ ಸ್ಥಳ ಪರಿಶೀಲನೆ ನಡೆಸಿ ನಂತರ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here