ಸಂವಿಧಾನ ನೀಡಿರುವ ಮತದಾನ ಹಕ್ಕನ್ನು ಉಪಯೋಗಿಸಿ: ಅನ್ನದಾನೇಶ್ವರ ಸ್ವಾಮಿ,

0
121

ಜಾಗೃತಿ ಬೆಳಕು ನ್ಯೂಸ್ ಹೊಸಪೇಟೆ (ವಿಜಯನಗರ)

ಪ್ರಜಾಪ್ರಭುತ್ವದ ಸೌಂದರ್ಯ ಎಂದರೆ ಅದು ಚುನಾವಣೆ ಪ್ರಕ್ರಿಯೆಯಾಗಿದ್ದು, ಸಂವಿಧಾನ ನೀಡಿರುವ ಮತದಾನ ಹಕ್ಕನ್ನು ನಾವು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ವಿಜಯನಗರ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ಅನ್ನದಾನೇಶ್ವರ ಸ್ವಾಮಿ ಅವರು ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ಒನಕೆ ಓಬವ್ವ ಅಧ್ಯಯನ ಪೀಠ, ಅಭಿವೃದ್ಧಿ ಅಧ್ಯಯನ ವಿಭಾಗ ಹಾಗೂ ರಾಷ್ಟಿçÃಯ ಸೇವಾ ಯೋಜನಾ ಘಟಕ ವತಿಯಿಂದ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ವರ್ಷದಾದ್ಯಂತ ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವುದು ಸಾಮಾನ್ಯವಾದ ಸಂಗತಿ. ಆದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನತೆ ಹತ್ತಿರದ ಮತದಾರರ ನೋಂದಣಿ ಕೇಂದ್ರಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊAಡು ಕಡ್ಡಾಯವಾಗಿ ಮತ ಚಲಾಯಿಸಿವುದು ಎಲ್ಲರ ಜವಾಬ್ದಾರಿಯಾಗಿದೆ. ಇನ್ನೂ ಅಕ್ಷರಸ್ಥರು ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುತ್ತಿರುವುದು ನೋವಿನ ಸಂಗತಿ. ಇದರಿಂದ ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಪ್ರದೇಶದಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಜನರು ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೈಸ್ಕೂಲ್, ಕಾಲೇಜ್ ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರಜ್ಞೆ ಹಾಗೂ ಚುನಾವಣೆಯ ಪ್ರಾಮುಖ್ಯತೆಯನ್ನು ರಸಪ್ರಶ್ನೆ, ಬೀದಿ ನಾಟಕ, ಅಣುಕು ಸಂಸತ್ತು, ಪ್ರಬಂಧ ಸ್ಪರ್ಧೆ, ಜಾಹೀರಾತುಗಳ ಮೂಲಕ ಮತದಾನದ ಜಾಗೃತಿ ಮೂಡಿಸುವ ಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಇದರಿಂದ ಯಾವುದೇ ಅಕ್ರಮಗಳಿಲ್ಲದೆ ನಿರ್ಭಿತವಾಗಿ ಯಾವುದೇ ಆಸೆ-ಆಕಾಂಕ್ಷೆ ಬಲಿಯಾಗದೆ ಮತದಾನ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಮಾತನಾಡಿ, ಮತದಾನ ಎನ್ನುವುದು ದಾನವಲ್ಲ ಅದು ನಮ್ಮೆಲ್ಲರ ಹಕ್ಕು. ಹೀಗಾಗಿ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಬೇಕು.
ಸಂಶೋಧನಾರ್ಥಿಗಳಾದ ನೀವು ಕೇವಲ ವಿದ್ಯಾರ್ಥಿಗಳಲ್ಲ ಜವಬ್ದಾರಿಯುತ ಪ್ರಜೆಗಳು ಈ ಹಿನ್ನೆಲೆಯಲ್ಲಿ ನೀವು ಕಡ್ಡಾಯವಾಗಿ ಮತ ಚಲಾಯಿಸುವುದರ ಜೊತೆಗೆ ನಿಮ್ಮ ಮನೆಯವರು ಹಾಗೂ ನೆರೆಹೊರೆಯವರಿಗೆ ಮತದಾನ ಜಾಗೃತಿ ಮೂಡಿಸಿ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಪ್ರೇರೆಪಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ಸಧೃಡ ಭಾರತ ಕಟ್ಟುವ ಹೊಣೆಗಾರಿಕೆ ನಮ್ಮದು ಎಂದರು.
ವಿವಿಯ ಅಧ್ಯಯನಾಂಗದ ನಿರ್ದೇಶಕರಾದ ಡಾ. ಅಮರೇಶ ಯತಗಲ್ ಅವರು ಮಾತನಾಡುತ್ತ ಮತದಾನ ಎನ್ನುವುದು ಹಕ್ಕು ಮತ್ತು ಕರ್ತವ್ಯ ನಮಗೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಕಲಂ 326ರ ಅನ್ವಯ ಒಂದು ಮತ ಒಂದು ಮೌಲ್ಯ ಎನ್ನುವ ಆಶಯದೊಂದಿಗೆ ರಾಷ್ಟçಪತಿ, ಕಾರ್ಮಿಕ, ಹಾಗೂ ರೈತ ಚಲಾಯಿಸಿದ ಮತದ ಮೌಲ್ಯ ಒಂದೇ. ಇಂತಹ ವಿಚಾರವನ್ನು ತಿಳಿದುಕೊಂಡು ನಾವು ಮತದಾನ ಪ್ರಕ್ರಿಯೆಗೆ ಯಾವುದೇ ಶ್ರೇಷ್ಠ, ಕನಿಷ್ಠ, ಜಾತಿ, ಧರ್ಮ, ಲಿಂಗ ತಾರತಮ್ಯಗಳಿಲ್ಲದೆ ಪ್ರಾಮಾಣಿಕವಾಗಿ ಮತ ಚಲಾಯಿಸಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಒನಕೆ ಓಬವ್ವ ಅಧ್ಯಯನ ಪೀಠದ ಸಂಚಾಲಕರು ಹಾಗೂ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಎ. ಶ್ರೀಧರ ಅವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ ವಿಭಾಗದ ಪ್ರಾಧ್ಯಾಪಕರಾದ ಬಸವರಾಜ ಹನುಮಂತಪ್ಪ ಗುಜಲರ್, ವಿವಿಧ ನಿಕಾಯದ ಡೀನರು, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here