Saturday, March 7, 2026
Homeಸಂಡೂರುಮೊಬೈಲ್ ಬಿಡಿ – ಪುಸ್ತಕ ಹಿಡಿ”: ನಿಡುಗುರ್ತಿ ಸರ್ಕಾರಿ ಶಾಲೆಯಲ್ಲಿ ಆಶಾ ವೃಕ್ಷ ಫೌಂಡೇಶನ್‌ನ ವಿನೂತನ...

ಮೊಬೈಲ್ ಬಿಡಿ – ಪುಸ್ತಕ ಹಿಡಿ”: ನಿಡುಗುರ್ತಿ ಸರ್ಕಾರಿ ಶಾಲೆಯಲ್ಲಿ ಆಶಾ ವೃಕ್ಷ ಫೌಂಡೇಶನ್‌ನ ವಿನೂತನ ಶಿಕ್ಷಣ ಪ್ರೋತ್ಸಾಹ ಕಾರ್ಯಕ್ರಮ

ಬಳ್ಳಾರಿ /ಸಂಡೂರು (ಜಾಗೃತಿ ಬೆಳಕು ನ್ಯೂಸ್)

ಮಕ್ಕಳಲ್ಲಿ ಓದುವ ಅಭ್ಯಾಸ ಬೆಳೆಸುವ ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ “ಮೊಬೈಲ್ ಬಿಡಿ – ಪುಸ್ತಕ ಹಿಡಿ” ಎಂಬ ಶೀರ್ಷಿಕೆಯಡಿ ಆಶಾ ವೃಕ್ಷ ಫೌಂಡೇಶನ್ ವತಿಯಿಂದ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಭಾಗವಾಗಿ ನಾಲ್ಕನೇ ತರಗತಿಯಿಂದ ಎಂಟನೇ ತರಗತಿ ವರೆಗೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಪರೀಕ್ಷೆ ನಡೆಸಿ, ಪ್ರತಿಯೊಂದು ತರಗತಿಯಿಂದ ಐದು ಮಂದಿ ವಿಜೇತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಶಾಲಾ ಬ್ಯಾಗ್ ಹಾಗೂ ಪುಸ್ತಕಗಳನ್ನು ವಿತರಿಸುವ ಮೂಲಕ ಪ್ರೋತ್ಸಾಹಿಸಲಾಯಿತು.

ಈ ಮೂಲಕ ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಗೆ ಉತ್ತೇಜನ ನೀಡುವ ಪ್ರಯತ್ನ ಮಾಡಲಾಯಿತು.ಆಶಾ ವೃಕ್ಷ ಫೌಂಡೇಶನ್‌ನ ಸಂಸ್ಥಾಪಕರಾದ ವಿನಯ್ ಕುಮಾರ್ ಹಾಗೂ ಶ್ರೀಮತಿ ರೂಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿಡುಗುರ್ತಿ ಸರ್ಕಾರಿ ಶಾಲೆಯಿಂದಲೇ ತಮ್ಮ ಸಮಾಜಸೇವೆಯ ಕಾರ್ಯವನ್ನು ಆರಂಭಿಸಿರುವುದಾಗಿ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಸಂಡೂರು ಕ್ಷೇತ್ರದಾದ್ಯಂತ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಮಕ್ಕಳನ್ನು ಪ್ರೋತ್ಸಾಹಿಸಲು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳು ಆದ ಡಿ. ಬಸಪ್ಪ ಸೇರಿದಂತೆ ಶಿಕ್ಷಕರಾದ ಶಶಿಧರ, ಕಿರಣ್ ಕುಮಾರ್, ಶ್ವೇತ ವಿ.ಕೆ., ವೆಂಕಟೇಶ್, ಮಲ್ಲಿಕಾರ್ಜುನ್, ಬಸವರಾಜ್, ಪಿರುಮ, ದೇವಣ್ಣ ಹಾಗೂ ವಿಜಯ್ ಕುಮಾರ್ ಉಪಸ್ಥಿತರಿದ್ದು, ಫೌಂಡೇಶನ್‌ನ ಈ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಹ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ :ಮಹಮ್ಮದ್ ಖಾಸಿಮ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Latest news