Welcome to jagruthibelaku   Click to listen highlighted text! Welcome to jagruthibelaku
Friday, May 22, 2026
Homeಹೊಸಪೇಟೆಹೊಸಪೇಟೆಯ ಅಂಬುಲೆನ್ಸ್ ಹಿರಿಯೂರು ಫ್ಲೈಓವರ್ ಬಳಿ ಭೀಕರ ಅಪಘಾತ.!

ಹೊಸಪೇಟೆಯ ಅಂಬುಲೆನ್ಸ್ ಹಿರಿಯೂರು ಫ್ಲೈಓವರ್ ಬಳಿ ಭೀಕರ ಅಪಘಾತ.!

ಹೊಸಪೇಟೆ /ವಿಜಯನಗರ, ಜಾಗೃತಿ ಬೆಳಕು ನ್ಯೂಸ್

ಹೊಸಪೇಟೆಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ರೋಗಿ ಸ್ಥಳೀಯ ಆಸ್ಪತ್ರೆಗೆ ದಾಖಲು – ಪ್ರಾಣಾಪಾಯ ತಪ್ಪಿದ ಘಟನೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್, ಔಟರಿಂಗ್ ಬಳಿ ಇಂದು ಮುಂಜಾನೆ ಹೊಸಪೇಟೆಯಿಂದ ಬೆಂಗಳೂರಿಗೆ ರೋಗಿಯನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ ಯಂದು ವರದಿ ಯಾಗಿದೆ.

ಅಪಘಾತದ ತೀವ್ರತೆಗೆ ಅಂಬುಲೆನ್ಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಂಬುಲೆನ್ಸ್‌ನಲ್ಲಿ ಸಾಗಿಸಲಾಗುತ್ತಿದ್ದ ರೋಗಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು. ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಶೇಷವಾಗಿ ಮಧ್ಯರಾತ್ರಿ ಹಾಗೂ ಬೆಳಗಿನ ಜಾವದ ವೇಳೆಯಲ್ಲಿ ನಿದ್ರಾಹೀನ ಚಾಲನೆ, ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆದ್ದಾರಿ ಸಂಚಾರದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವರದಿ : ಮಹಮ್ಮದ್ ಗೌಸ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Latest news
Click to listen highlighted text!