ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ : ರಾಜಶೇಖರ್‌ ಹಿಟ್ನಾಳ್!

0
361

ಹೊಸಪೇಟೆ :-ಜಾಗೃತಿ ಬೆಳಕು (ಬಿಗ್ ಬ್ರೇಕಿಂಗ್ )

‘ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಈಗಾಗಲೇ ಒಂದು ಸಲ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿ, ಅನಂತರ ಅಧಿಕಾರದ ಆಸೆಗೆ ಬಿಜೆಪಿ ಸೇರಿದ್ದಾರೆ. ಅವರ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ಎಲ್ಲ ಗೊತ್ತಿದೆ. ಸೋಲುವ ಭೀತಿಯಿಂದ ಪುನಃ ಕಾಂಗ್ರೆಸ್‌ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದಾರೆ ಎಂಬ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಆದರೆ, ಯಾವುದೇ ಕಾರಣಕ್ಕೂ ಆನಂದ್‌ ಸಿಂಗ್‌ ಅವರಾಗಲಿ, ಅವರ ಮಗನನ್ನು ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಅವರ ಮಗ ಸಿದ್ದಾರ್ಥ ಸಿಂಗ್‌ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ಕಾಂಗ್ರೆಸ್‌ ಮುಖಂಡರಾದ ರಾಜಶೇಖರ್‌ ಹಿಟ್ನಾಳ್‌ ತಿಳಿಸಿದರು ಹಾಗೊಂದು ವೇಳೆ ಪಕ್ಷದ ಮಟ್ಟದಲ್ಲಿ ಈ ಕುರಿತು ಚರ್ಚೆಗಳಾದರೆ ಅದನ್ನು ನಾವು ವಿರೋಧಿಸುತ್ತೇವೆ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ವಿಜಯನಗರ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ. ಪಕ್ಷಾಂತರ ಮಾಡುವ ಮಾತುಗಳು ಕೇಳಿ ಬರುತ್ತಿವೆ. ನಮ್ಮ ಚಿತ್ತ ಪಕ್ಷ ಸಂಘಟನೆಯ ಕಡೆಗೆ ನೆಟ್ಟಿದೆ. ಪಕ್ಷ ಯಾರಿಗೇ ಟಿಕೆಟ್‌ ಕೊಟ್ಟರೂ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದರು.
ರಾಜ್ಯದವರೇ ಆದ ಪರಿಶಿಷ್ಟ ಜಾತಿಗೆ ಸೇರಿದ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿರುವುದು ಖುಷಿಯ ವಿಚಾರ.

ಅಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ರಾಜ್ಯಕ್ಕೆ ಬರುತ್ತಿದ್ದಾರೆ. ನ. 6ರಂದು ಬೆಂಗಳೂರಿನಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಮನೆ ಮೈದಾನದ ವರೆಗೆ ಪಕ್ಷದ ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸುವರು. ವಿಜಯನಗರ ಜಿಲ್ಲೆಯಿಂದ ಮೂರು ಸಾವಿರ ಜನ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕಾಂಗ್ರೆಸ್‌ ಮುಖಂಡರಾದ ಅಬ್ದುಲ್‌ ವಹಾಬ್‌, ಗುಜ್ಜಲ್‌ ನಾಗರಾಜ್‌, ಮಹಮ್ಮದ್‌ ಇಮಾಮ್ ನಿಯಾಜಿ, ಕುರಿ ಶಿವಮೂರ್ತಿ, ವಿನಾಯಕ ಶೆಟ್ಟರ್‌, ಎಂ.ಸಿ. ವೀರಸ್ವಾಮಿ, ಸೋಮಶೇಖರ್‌ ಬಣ್ಣದಮನೆ ಇದ್ದರು.

ವರದಿ :-ಮೊಹಮ್ಮದ್ ಗೌಸ್

LEAVE A REPLY

Please enter your comment!
Please enter your name here