ಹೊಸಪೇಟೆ :-ಜಾಗೃತಿ ಬೆಳಕು
ನ.9 ನಗರದಲ್ಲಿ ಬುಧವಾರ ಜಿಲ್ಲಾಡಳಿತ, ಹೊಸಪೇಟೆ ನಗರಸಭೆ ಸಹಯೋಗದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ದಿನದ ಅಂಗವಾಗಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.ನಗರಸಭೆ ಕಚೇರಿ ಆವರಣದಲ್ಲಿ ಜಾಥಾಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್ ಬೋಯರ್ ನಾರಾಯಣ ರಾವ್ ಅವರು ಚಾಲನೆ ನೀಡಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಡೊಳ್ಳು ಬಾರಿಸುತ್ತಾ, ವಿವಿಧ ಘೋಷಣೆಗಳನ್ನು ಕೂಗುತ್ತ ಜಾಥಾವು ಆರಂಭಗೊಂಡಿತು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು, ಅಂಗವಿಕಲರು ಜಾಥಾದಲ್ಲಿ ಪಾಲ್ಗೊಂಡು ಅಂಬೇಡ್ಕರ್ ವೃತ್ತದ ಬಳಿ ತಲುಪಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿಇಒ ಹರ್ಷಲ್ ಬೋಯರ್ ನಾರಾಯಣರಾವ್ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆರಂಭಗೊಂಡಿದ್ದು, ನೂತನವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಸೇರಿದಂತೆ ಹೆಸರು ಇನ್ನಿತರ ವಿವರದ ತಿದ್ದುಪಡಿ, ವರ್ಗಾವಣೆಗೆ ಸಂಬಂಧಿಸಿದ ಸೇವೆಗಳನ್ನು ಮತದಾರರು ಪಡೆದುಕೊಳ್ಳಬಹುದು.
18 ವರ್ಷ ತುಂಬಿದ ಯುವಜನತೆ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಇತರರಿಗೂ ಅರಿವು ಮೂಡಿಸಬೇಕು ಎಂದರು.
ಉಪವಿಭಾಗಾಧಿಕಾರಿ ಸಿದ್ಧರಾಮೇಶ್ವರ, ಡಿಡಿಪಿಐ ಜಿ.ಕೊಟ್ರೇಶ್, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ನಗರಸಭೆ ಪೌರಾಯುಕ್ತ ಮನೋಹರ್, ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಬಿಇಒ ಚನ್ನಬಸಪ್ಪ ಇದ್ದರು.
ವರದಿ :-ಮೊಹಮ್ಮದ್ ಗೌಸ್