ಹೊಸಪೇಟೆ:- ಜಾಗೃತಿ ಬೆಳಕು
ಜ,22. ಮಕ್ಕಳ ಹಕ್ಕುಗಳ ಸಂರಕ್ಷಣೆ ಜೊತೆಗೆ ಕಾನೂನು ಪರಿಪಾಲನೆ ಕುರಿತು ಮಕ್ಕಳಿಗೆ ಜಾಗೃತಿ ಅವಶ್ಯವಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಿಶನ್ ಬಿ.ಮಾಡಲಗಿ ತಿಳಿಸಿದರು.
ನಗರದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ, ಕ್ರೀಮ್ ಯೋಜನೆ ಹಾಗೂ ಡಾನ್ ಬೋಸ್ಕೊ ಸಂಸ್ಥೆ ವತಿಯಿಂದ ಶನಿವಾರ ಲಿಟಲ್ ಫ್ಲವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಆರ್‌ಟಿಇ, ಪೋಕ್ಸೋ ಕಾಯಿದೆ, ಜೆಜೆಬಿ ಹಾಗೂ ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಹೊಸ ಮಾರ್ಗಸೂಚಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಡಾನ್‌ಬೋಸ್ಕೊ ನಿರ್ದೇಶಕ ರೋಷನ್, ಗ್ರಾಮೀಣ ಪೊಲೀಸ್ ಠಾಣೆಯ ಮೋತಿನಾಯ್ಕ, ಮಕ್ಕಳ ಸಹಾಯವಾಣಿ ಸಂಯೋಜಕ ಚಿದಾನಂದ, ಕ್ರೀಮ್ ಯೋಜನಾ ಸಂಯೋಜಕ ಶರಣಪ್ಪ ಇದ್ದರು.
ವರದಿ :-ಮೊಹಮ್ಮದ್ ಗೌಸ್