Friday, March 13, 2026
Homeಕೂಡ್ಲಿಗಿಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆಕೆ,4.10 ಲಕ್ಷ ಮೌಲ್ಯದ 360 ಅಕ್ಕಿ ಚೀಲಗಳು ಪೊಲೀಸರಿಂದ ವಶ.!

ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆಕೆ,4.10 ಲಕ್ಷ ಮೌಲ್ಯದ 360 ಅಕ್ಕಿ ಚೀಲಗಳು ಪೊಲೀಸರಿಂದ ವಶ.!

ವಿಜಯನಗರ / ಕೂಡ್ಲಿಗಿ (ಜಾಗೃತಿ ಬೆಳಕು ನ್ಯೂಸ್)

ನಗರದ ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ( ಪಡಿತರ ) ಅಕ್ಕಿಯನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.ಮಾರ್ಚ್ 9, 2026 ರಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಕೂಡ್ಲಿಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿತು.

ಈ ವೇಳೆ ಅನುಮಾನಾಸ್ಪದವಾಗಿ ಸಾಗಿಸುತ್ತಿದ್ದ ಅಕ್ಕಿ ಚೀಲಗಳನ್ನು ಪರಿಶೀಲಿಸಿದಾಗ ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬುದು ತಿಳಿದುಬಂದಿದೆ.ಕಾರ್ಯಾಚರಣೆಯಲ್ಲಿ ಒಟ್ಟು 360 ಅಕ್ಕಿ ಚೀಲಗಳು (18,240 ಕೆ.ಜಿ.) ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ರೂ. 4,10,400 ಆಗಿದೆ.ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 49/26 ದಾಖಲಿಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ವರದಿ :ಮಹಮ್ಮದ್ ಗೌಸ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Latest news