ಹೊಸಪೇಟೆ/ ವಿಜಯನಗರ,ಜಾಗೃತಿ ಬೆಳಕು ನ್ಯೂಸ್
ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯ (ಪಿಡಿಐಟಿ) ವತಿಯಿಂದ ವಾರ್ಷಿಕೋತ್ಸವ ‘ಸಿಂಚನ-2026’ ಅಂಗವಾಗಿ ಮೇ 20ರಂದು ಬುಧವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ 10:30ಕ್ಕೆ ಪದವಿ ದಿನಾಚರಣೆ ಹಾಗೂ ಸಂಜೆ 6:30ಕ್ಕೆ ವಾರ್ಷಿಕೋತ್ಸವ ಸಮಾರಂಭ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಬೆಳಗ್ಗೆ ನಡೆಯುವ ಪದವಿ ದಿನಾಚರಣೆ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಂ. ಮುನಿರಾಜು ಭಾಗವಹಿಸಲಿದ್ದು, ಗೌರವಾನ್ವಿತ ಅತಿಥಿಗಳಾಗಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಎಸ್. ಮನ್ನಿಕೇರಿ ಆಗಮಿಸಲಿದ್ದಾರೆ.ಸಂಜೆ 6:30ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿಯ ಸದಸ್ಯರಾದ ಡಾ. ಕರುಣಾಕರ ರೈ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ತೋರಣಗಲ್ಲಿನ ಜೆಎಸ್‌ಡಬ್ಲ್ಯೂ ಸ್ಟೀಲ್ಸ್ ಲಿಮಿಟೆಡ್‌ನ ಮಾಜಿ ಅಧ್ಯಕ್ಷರಾದ ಶ್ರೀ ರಾಜಶೇಖರ ಪಟ್ಟಣಶೆಟ್ಟಿ ಆಗಮಿಸಲಿದ್ದು, ವಿಶೇಷ ಆಹ್ವಾನಿತರಾಗಿ ಹೊಸಪೇಟೆಯ ಎಂಎಸ್‌ಪಿಎಲ್ ಸಂಸ್ಥೆಯ ಕಾರ್ಪೊರೇಟ್ ಕಮ್ಯುನಿಕೇಷನ್ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕರಾದ ಕೆ. ಪ್ರಭುದೆವಪ್ಪ ಭಾಗವಹಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಣೇಕಲ್ ಮಹಾಂತೇಶ್ ವಹಿಸಲಿದ್ದಾರೆ. ವೀ.ವಿ. ಸಂಘದ ಉಪಾಧ್ಯಕ್ಷರಾದ ಶ್ರೀ ಜಾನೆಕುಂಟೆ ಬಸವರಾಜ್, ಕಾರ್ಯದರ್ಶಿ ಡಾ. ಅರವಿಂದ್ ಪಟೇಲ್, ಸಹಕಾರ್ಯದರ್ಶಿ ಯಾಳ್ಪಿ ಮೇಟಿ ಪಂಪನಗೌಡ, ಕೋಶಾಧಿಕಾರಿ ಬೈಲುವದ್ದಿಗೇರಿ ಯರ್ರಿಸ್ವಾಮಿ ಸೇರಿದಂತೆ ಪಿಡಿಐಟಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಕಲ್ಗುಡಿ ಮಂಜುನಾಥ್ ಹಾಗೂ ಸದಸ್ಯರಾದ ಐ.ಎನ್. ಸಂಗನಬಸಪ್ಪ, ಅನಿಲ್ ಆರ್. ಜವಳಿ, ಬಿ. ಚಂದ್ರಮೌಳಿ ಮತ್ತು ಡಿ. ಗುರುಬಸವರಾಜ್ ಉಪಸ್ಥಿತರಿರುತ್ತಾರೆ.ಇದೇ ವೇಳೆ ಪ್ರಾಂಶುಪಾಲರಾದ ಡಾ. ರೋಹಿತ್ ಯು.ಎಂ., ಉಪಪ್ರಾಂಶುಪಾಲರಾದ ಡಾ. ಪಾರ್ವತಿ ಕಡ್ಲಿ, ‘ಸಿಂಚನ-2026’ ಕಾರ್ಯಕ್ರಮದ ಸಂಯೋಜಕರಾದ ಡಾ. ರವಿಕುಮಾರ್ ಎಸ್.ಪಿ. ಹಾಗೂ ಪದವಿ ದಿನಾಚರಣೆಯ ಸಂಯೋಜಕರಾದ ಡಾ. ಮಂಜುಳಾ ಎಸ್.ಡಿ. ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಲಿವೆ.
ವರದಿ :ಮಹಮ್ಮದ್ ಗೌಸ್
