ಜಾಗೃತಿ ಬೆಳಕು ನ್ಯೂಸ್,ಹೊಸಪೇಟೆ,ವಿಜಯನಗರ ಜಿಲ್ಲೆ
ಫೆ.08ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಜನತಾ ದರ್ಶನ ಕಾರ್ಯಕ್ರಮವು ಬೆಂಗಳೂರಿನಲ್ಲಿ ಫೆ.8ರಂದು ಯಶಸ್ವಿಯಾಗಿ ಆರಂಭವಾಯಿತು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ಅಹವಾಲು ಸಲ್ಲಿಸುವ ಮಹತ್ವದ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ಹೊಸಪೇಟೆ ನಗರದ ಜಿಲ್ಲಾಡಳಿತ ಭವನದಲ್ಲಿನ ವಿಡಿಯೋ ಕಾನ್ಫರೆನ್ಸ್ ಹಾಲನಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಹಾಗೂ ಜಿ.ಪಂ. ಸಿ.ಇ.ಓ. ಸದಾಶಿವ ಪ್ರಭು ಬಿ ಅವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಮಹದ್ ಅಲಿ ಅಕ್ರಮ ಷಾಹ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವರದಿ :-ಮೊಹಮ್ಮದ್ ಗೌಸ್